ಯುಪಿಎಸ್‌ಸಿ ಗೊಂದಲ: ಎಲ್ಲಾ ಪಕ್ಷದ ಜತೆ ಚರ್ಚೆಗೆ ಕೇಂದ್ರ ನಿರ್ಧಾರ
ಯುಪಿಎಸ್‌ಸಿ ಪರೀಕ್ಷೆ ಗೊಂದಲ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ...
ನವದೆಹಲಿ: ಯುಪಿಎಸ್‌ಸಿ ಪರೀಕ್ಷೆ ಗೊಂದಲ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎನ್‌ಡಿಎ ಸರ್ಕಾರ ಎಲ್ಲಾ ಪಕ್ಷಗಳೊಂದಿಗೆ ಸಭೆ ನಡೆಸಲು ನಿರ್ಧರಿಸಿದೆ.
ಯುಪಿಎಸ್‌ಸಿ ಪರೀಕ್ಷೆ ಗೊಂದಲ ಬಗೆಹರಿಯದ ಹಿನಲ್ಲೆ ಪ್ರತಿಭಟನೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಎಲ್ಲಾ ಪಕ್ಷಗಳೊಂದಿಗೆ ಸಭೆ ಸೇರಿ ಚರ್ಚಿಸಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡ್‌ಕರ್ ತಿಳಿಸಿದ್ದಾರೆ.
ಆದರೆ ಪ್ರತಿಭಟನೆ ಬಿಡದ ಯುಪಿಎಸ್‌ಸಿ ಅಭ್ಯರ್ಥಿಗಳು, ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.