ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉಪ ಚುನಾವಣೆ ನಂತರ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ...

Vishwanath S
Updated On : 8 Aug 2014, 10:45 am

ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರಿಗೆ ಉಪ ಚುನಾವಣೆ ನಂತರ ಅಂದರೆ ಆ.21ರ ಬಳಿಕ ಸಚಿವ ಸಂಪುಟ ಸೇರುವ ಅವಕಾಶವಿದ್ದು, ಸಚಿವ ಸಂಪುಟದಲ್ಲಿ ಯಾರು ಸ್ಥಾನ ಪಡೆಯುತ್ತಾರೆ ಎಂಬುದು ಕಾದು ನೋಡಬೇಕಿದೆ.

ಸಚಿವ ಸಂಪುಟ ವಿಸ್ತರಣೆಗೆ ಆಕಾಂಕ್ಷಿ ಶಾಸಕರು ಒತ್ತಡ ಹೇರುತ್ತಿದ್ದರು. ಹೀಗಾಗಿ ಸಿದ್ದರಾಮಯ್ಯ ಅವರು ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಅಸ್ತ್ರ ಪ್ರಯೋಗಿಸಿದ್ದರು. ಈಗ ಉಪ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ವಿಧಾನಸೌಧದಲ್ಲಿ ಹೇಳಿದ್ದಾರೆ.

ಹೈಕಮಾಂಡ್ ನಾಯಕರು ಸೂಚನೆ ನೀಡಿದರೆ ಯಾವುದೇ ಕ್ಷಣದಲ್ಲೂ ಸಚಿವ ಸಂಪುಟ ವಿಸ್ತರಣೆ ಮಾಡುವಾಗಿ ಈ ಹಿಂದೆ ಸಿದ್ದರಾಮಯ್ಯ ಹೇಳಿದ್ದರು. ಈ ಬಗ್ಗೆ ಚರ್ಚೆ ನಡೆಸಲು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಆಗಸ್ಟ್ ಮೊದಲ ವಾರದಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತೆರಳಬೇಕಿತ್ತು. ಆದರೆ, ಉಪ ಚುನಾವಣೆ ಬಂದ ಕಾರಣ ಈ ಭೇಟಿ ರದ್ದಾಗಿತ್ತು.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ನಡೆದರೆ, ಯಾರು ಸಂಪುಟ ಸೇರಬಹುದು ಪುನರ್ ರಚನೆ ಮಾಡುವುದಾದರೆ ಯಾರನ್ನು ಕೈಬಿಡಬಹುದು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಪರಮೇಶ್ವರ್ ಗೆ ಸಿಗುವುದೇ ಡಿಸಿಎಂ ಪಟ್ಟ?

ಸಚಿವ ಸಂಪುಟ ಸೇರುವವರ ಹೆಸರಿನಲ್ಲಿ ಮೊದಲಿಗೆ ಕೇಳಿಬರುತ್ತಿರುವುದು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ರದ್ದು, ಉಪ ಮುಖ್ಯಮಂತ್ರಿ ಹುದ್ದೆಯ ಆಸೆ ಹೊಂದಿರುವ ಪರಮೇಶ್ವರ್ ಯಾವ ಸ್ವರೂಪದಲ್ಲಿ ಸಂಪುಟ ಸೇರಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement