ಕೆಪಿಎಸ್‌ಸಿ ರದ್ದು ಆದೇಶ ಹಿಂಪಡೆಯಲು ಸರ್ಕಾರಕ್ಕೆ ಹೆಚ್‌ಡಿಕೆ ಗಡುವು
2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ರದ್ದು ಆದೇಶ ಹಿಂಪಡೆಯಿರಿ, ಇಲ್ಲದಿದ್ದರೆ ಅಭ್ಯರ್ಥಿಗಳ ಪರ...
ಬೆಂಗಳೂರು: 2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ರದ್ದು ಆದೇಶ ಹಿಂಪಡೆಯಿರಿ, ಇಲ್ಲದಿದ್ದರೆ ಅಭ್ಯರ್ಥಿಗಳ ಪರ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ರದ್ದು ಆದೇಶ ಹಿಂಪಡೆಯಲು ನಾಳೆ ಬೆಳಗ್ಗೆ 10 ಗಂಟೆಯವರೆಗೂ ಸರ್ಕಾರಕ್ಕೆ ಗಡುವು ನೀಡಿರುವ ಕುಮಾರಸ್ವಾಮಿಯವರು ಆದೇಶ ಹಿಂಪಡೆಯದಿದ್ದರೆ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೆಪಿಎಸ್‌ಸಿ ನೇಮಕಾತಿ ರದ್ದು ಕುರಿತಾಗಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಬಡವರು, ಹಿಂದುಳಿದ ವರ್ಗದವರ ಮೇಲೆ ಸರ್ಕಾರ ಗದಾಪ್ರಹಾರ ನಡೆಸುತ್ತಿದೆ. ಕೆಲವರ ಹಿತ ಕಾಯುವುದಕ್ಕಾಗಿ ಸರ್ಕಾರ ಏಕಾಏಕಿ ಕ್ರಮಕೈಗೊಂಡಿದೆ. ಇದರಿಂದ ಅಮಾಯಕ ಜನರಿಗೆ ತೊಂದರೆಯಾಗುತ್ತದೆ. ರಾಜ್ಯ ಸರ್ಕಾರದ ಅನ್ಯಾಯದ ವಿರುದ್ಧ ದನಿ ಎತ್ತಿದ್ದು, ಅಭ್ಯರ್ಥಿಗಳಿಗೆ ನ್ಯಾಯ ಸಿಗುವವರೆಗೂ ನಾನು ಅಭ್ಯರ್ಥಿಗಳ ಕೈ ಬಿಡುವುದಿಲ್ಲ ಎಂದು ಹೇಳಿದ್ದಾರೆ.