ನವದೆಹಲಿ: ಯುಪಿಎಸ್‌ಸಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು ಮೊದಲು ಪರೀಕ್ಷೆ ನಡೆಯಲಿ. ಆ ನಂತರ ಭಾಷಾ ವಿಷಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಭಾಷಾ ವಿಷಯಕ್ಕೆ ಕುರಿತಾಗಿ ಸರ್ಕಾರ ಚಿಂತನೆ ನಡೆಸಿದ್ದು, ಯುಪಿಎಸ್‌ಸಿ ಪರೀಕ್ಷೆ ನಡೆದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಅಲ್ಲಿಯವರೆಗೂ ಎಲ್ಲ ಪಕ್ಷಗಳೂ ಸಹಕರಿಸಬೇಕು’ ಎಂದರು.
‘ಈ ವಿಷಯದಲ್ಲಿ ರಾತ್ರೋರಾತ್ರಿ ಬದಲಾವಣೆ ತರಲು ಸಾಧ್ಯವಿಲ್ಲ. ಈಗಾಗಲೇ ಪರೀಕ್ಷಾ ದಿನಾಂಕ ಘೋಷಣೆಯಾಗಿದೆ. ಆಗಸ್ಟ್ 24ರಂದು ಪೂರ್ವಭಾವಿ ಪರೀಕ್ಷೆ ಬರೆಯಲು ಲಕ್ಷಾಂತರ ಮಂದಿ ಅಭ್ಯರ್ಥಿಗಳು ತಯಾರಿ ನಡೆಸಿದ್ದಾರೆ. ಇಂತಹ ಸಂದರ್ಭದಲ್ಲಿ ಅಭ್ಯರ್ಥಿಗಳನ್ನು ಗೊಂದಲಕ್ಕೆ ದೂಡುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.