ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಮೈಸೂರು, ಮಂಡ್ಯ ಹಾಗೂ ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಕಡೆ...

Lingaraj Badiger
Updated On : 7 Aug 2014, 5:49 am

ಬೆಂಗಳೂರು: ಬೆಂಗಳೂರು, ಮೈಸೂರು, ಮಂಡ್ಯ ಹಾಗೂ ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಏಕಕಾಲಕ್ಕೆ ದಾಳಿ ಮಾಡಿದ್ದು, 13 ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್ ಸುಬ್ರಹ್ಮಣ್ಯ ನೇತೃತ್ವದಲ್ಲಿ ಬೆಂಗಳೂರಿನ ಮೂರು ಕಡೆ ದಾಳಿ ನಡೆಸಿರುವ ಅಧಿಕಾರಿಗಳು, ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲಸೂರು ಗೇಟ್ ಎಸಿಪಿ ಸಿದ್ದರಾಮಯ್ಯ, ಎಸ್‌ಸಿಆರ್‌ಬಿ ಇನ್ಸ್‌ಪೆಕ್ಟರ್ ಎನ್.ಟಿ.ಶ್ರೀನಿವಾಸ್ ರೆಡ್ಡಿ ಹಾಗೂ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸದಸ್ಯ ಜಯರಾಮ್ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಮೈಸೂರಿನಲ್ಲಿ ಡಿವೈಎಸ್‌ಪಿ ಸುಂದರಾಜ್ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಚಿತ್ರದುರ್ಗದಲ್ಲೂ ಲೋಕಾಯುಕ್ತ ಎಸ್‌ಪಿ ಶ್ರೀಧರ್ ಅವರ ನೇತೃತ್ವದಲ್ಲಿ ತಾಲೂಕ ಪಂಚಾಯತ್ ಇಒ ರುದ್ರಮುನಿ ಹಾಗೂ ಚೆಸ್ಕಾ ಜಾಗೃತದಳದ ಅಧಿಕಾರಿ ಪುಟ್ಟಸ್ವಾಮಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ತುಂಗಾ ಮೇಲ್ದಂಡೆ ಯೋಜನೆ ಇಂಜಿನಿಯರ್ ಅಂದಾನಪ್ಪ ಪಾಟೀಲ್, ಬಳ್ಳಾರಿಯಲ್ಲಿ ಕಾರ್ಮಿಕ ಇಲಾಖೆ ಎಫ್‌ಡಿಎ ನಿರಂಜನ್ ಮೂರ್ತಿ ಹಾಗೂ ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement