ಹೆಚ್‌ಡಿಕೆ ಅಮರಣಾಂತ ಉಪವಾಸ: ಜೆಡಿಎಸ್‌ನಲ್ಲೇ ಅಪಸ್ವರ
2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ...
ಬೆಂಗಳೂರು: 2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ರದ್ದು ಪಡಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೈಗೊಳ್ಳಲಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಜೆಡಿಎಸ್‌ನಲ್ಲೆ ಅಪಸ್ವರ ಕೇಳಿ ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ಎಂ.ಪಿ ನಾಣಯ್ಯ ಅವರು ಕುಮಾರಸ್ವಾಮಿ ಕೈಗೊಳ್ಳಲಿರುವ ಅಮರಣಾಂತ ಉಪವಾಸ ಸತ್ಯಾಗ್ರಹ ಅವರ ವೈಯಕ್ತಿಕ ನಿರ್ಧಾರವಾಗಿದ್ದು, ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, 2011ನೇ ಕೆಪಿಎಸ್‌ಸಿ ನೇಮಕಾತಿ ಪ್ರಕರಣದ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದು, ಹೈಕೋರ್ಟ್‌ನ ತೀರ್ಪು ಅಂತಿಮವಾಗಿರುತ್ತದೆ ಎಂದು ನಾಣಯ್ಯ ಹೇಳಿದ್ದಾರೆ.
ನನ್ನ ನಿರ್ಧಾರದಲ್ಲಿ ಬದಲಾವಣೆ ಇಲ್ಲ: ಹೆಚ್‌ಡಿಕೆ
ನಾಣಯ್ಯ ಅವರ ಹೇಳಿಕೆ ಹೊರ ಬರುತ್ತಿದ್ದಂತೆ ಈ ಕುರಿತು ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ಅವರು, ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನೊಂದ ಅಭ್ಯರ್ಥಿಗಳ ಪರವಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು.
ನನ್ನ ಹೋರಾಟ ರಾಜ್ಯ ಸರ್ಕಾರದ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಹೋರಾಟವಲ್ಲ. ಇದು ಪಕ್ಷಾತೀತವಾಗಿ ನೊಂದ ಅಭ್ಯರ್ಥಿಗಳ ಭವಿಷ್ಯಕ್ಕಾಗಿ ನಡೆಸುತ್ತಿರುವ ಹೋರಾಟ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ನ್ಯಾಯ ಸಿಗುವವರೆಗೂ ಹಾರಾಟ ಮುಂದುವರೆಸುವೆ ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದರು.