ಚೆನೈ: ತಮಿಳುನಾಡಿನ ಸತ್ಯಮಂಗಲಾಮ್ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಗೆ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ನಡೆದಿದೆ.
ನಿನ್ನೆ ದನ ಕರುಗಳನ್ನು ಮೇಯಿಸಲು ಅರಣ್ಯಕ್ಕೆ ಹೋದ ಸಂದರ್ಭದಲ್ಲಿ ರಿಶಾನ್(42) ಎಂಬಾತನ ಮೇಲೆ ಚಿರತೆಗಳು ದಾಳಿ ನಡೆಸಿವೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಆತ ಸಾವನ್ನಪ್ಪಿದ್ದಾನೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಎರಡು ತಿಂಗಳಲ್ಲಿ ಚಿರತೆ ದಾಳಿಯಿಂದಾಗಿ ರಿಶಾನ್ ಸೇರಿದಂತೆ ಇದುವರೆಗೂ ಮೂವರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.