ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಿವೀಸ್ ಸರಣಿ ಆಘಾತ: 2ನೇ ಸ್ಥಾನಕ್ಕೆ ತಳ್ಳಲ್ಪಟ್ಟ ಭಾರತ

ನ್ಯೂಜಿಲೆಂಡ್ ಸರಣಿಯಲ್ಲಿ ಕಳಪೆ ಆಟ ಪ್ರದರ್ಶನ ನೀಡಿದ ಭಾರತ ತಂಡ ಇದೀಗ ಅಂತಾರಾಷ್ಟ್ರೀಯ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

Srinivasa Murthy VN
Updated On : 2 Feb 2014, 6:59 am

ನವದೆಹಲಿ: ನ್ಯೂಜಿಲೆಂಡ್ ಸರಣಿಯಲ್ಲಿ ಕಳಪೆ ಆಟ ಪ್ರದರ್ಶನ ನೀಡಿದ ಭಾರತ ತಂಡ ಇದೀಗ ಅಂತಾರಾಷ್ಟ್ರೀಯ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಒಟ್ಟು 115 ಅಂಕಗಳನ್ನು ಹೊಂದಿರುವ ಭಾರತ ಎರಡನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಜಯಿಸಿರುವ ಆಸ್ಟ್ರೇಲಿಯಾ ತಂಡ 117 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದೆ. ಆದರೆ ನೂತನವಾಗಿ ಬಿಡುಗಡೆ ಮಾಡಿರುವ ಬ್ಯಾಟ್ಸ್ ಮನ್ ಗಳ ರ್ಯಾಂಕಿಂಗ್‌ನಲ್ಲಿ ಭಾರತದ ವಿರಾಟ್ ಕೊಹ್ಲಿ ಅವರು 2ನೇ ಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ಸರಣಿಯಲ್ಲಿ ಭಾರತ ಮುಖಭಂಗ ಅನುಭವಿಸಿದರೂ, ವಿರಾಟ್ ಕೊಹ್ಲಿ ಅವರ ಪಾಲಿಗೆ ಅದ್ಭುತ ಸರಣಿಯಾಗಿತ್ತು.

ಸರಣಿಯುದ್ದಕ್ಕೂ ಉತ್ತಮ ಆಟ ಪ್ರದರ್ಶಿಸಿದ ಕೊಹ್ಲಿ 1 ಶತಕ ಸಹಿತ 291ರನ್ ಗಳನ್ನು ಸಿಡಿಸಿದ್ದರು. ಹೀಗಾಗಿ ಅಂತಾರಾಷ್ಟ್ರೀಯ ಬ್ಯಾಟ್ಸ್ ಮನ್‌ಗಳ ಪಟ್ಟಿಯಲ್ಲಿ ಕೊಹ್ಲಿ 870 ಅಂಕಗಳನ್ನು ಪಡೆದು 2ನೇ ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಎಬಿ ಡಿವಿಲಿಯರ್ಸ್ 872 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಕೊಹ್ಲಿ ಮೊದಲ ಸ್ಥಾನಕ್ಕೇರಲು ಕೇವಲ 2 ಅಂಕಗಳ ಅವಶ್ಯಕತೆ ಇದ್ದು, ಉತ್ತಮ ಫಾರ್ಮ್ ನಲ್ಲಿರುವ ಅವರು ಮುಂಬರುವ ಏಕದಿನ ಸರಣಿಯಲ್ಲಿಯೇ ಈ ಸಾಧನೆ ಮಾಡುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement