ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಡಿವೈಎಸ್ಪಿ ಧರ್ಮೇಶ್ ವಿರುದ್ಧ ಕ್ರಮ: ಸಿದ್ದು

ಬಂಡೀಪುರದ ರಾಷ್ಟ್ರೀಯ ಉದ್ಯಾನವನದ ಓಂಕಾರ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿದ್ದ ಮೈಸೂರು ಸಿಐಡಿ ಡಿವೈಎಸ್ಪಿ ಟಿ.ಕೆ. ಧರ್ಮೇಶ್ ಅವರ...

Vishwanath S
Updated On : 2 Feb 2014, 11:01 am

ಮೈಸೂರು: ಬಂಡೀಪುರದ ರಾಷ್ಟ್ರೀಯ ಉದ್ಯಾನವನದ ಓಂಕಾರ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿದ್ದ, ಮೈಸೂರು ಸಿಐಡಿ ಡಿವೈಎಸ್ಪಿ ಟಿ.ಕೆ. ಧರ್ಮೇಶ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ನಂಜನಗೂಡಿನ ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿವೈಎಸ್ಪಿ ಧರ್ಮೇಶ್ ಅವರು ಉನ್ನತ ಅಧಿಕಾರದಲ್ಲಿದ್ದು, ಈ ರೀತಿ ಮಾಡಿರುವುದು ಸರಿಯಲ್ಲ, ಈ ಹಿನ್ನೆಲೆಯಲ್ಲಿ ಯಾವ ಅಧಿಕಾರಿ ತಪ್ಪು ಮಾಡಿದರೂ ಅದು ತಪ್ಪೇ. ಹೀಗಾಗಿ ಧರ್ಮೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಟಿ.ಕೆ. ಧರ್ಮೇಶ್ ಸೇರಿದಂತೆ ಅವರ ಕೆಲ ಸ್ನೇಹಿತರು ಬಂಡೀಪುರದ ರಾಷ್ಟ್ರೀಯ ಉದ್ಯಾನವನದ ಓಂಕಾರ ಅರಣ್ಯದ ಕೊತ್ತನಹಳ್ಳಿಯ ಬಳಿ ಜಿಂಕೆ ಬೇಟೆಯಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮೇಶ್ ವಿರುದ್ಧ ಟೀಕೆಗಳು ಕೇಳಿಬಂದಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement