ನಾನು ಲೋಕಸಭೆಯಲ್ಲಿ ಸ್ಪರ್ಧಿಸುವುದಿಲ್ಲ: ಯಡಿಯೂರಪ್ಪ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ತುಮಕೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ನಾನು ಲೋಕಸಭಾ ಚುನಾವಣೆಯ ಸ್ಪರ್ಧಿಯಲ್ಲಿ. ಪಕ್ಷದಲ್ಲಿ ನನಗೆ ಯಾವುದೇ ಸ್ಥಾನ ಮಾನ ಬೇಡ. ಮಾಜಿ ಮುಖ್ಯಮಂತ್ರಿಯಾಗಿ ನಾನು ನನ್ನ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದರು.
ಅಂತೆಯೇ ಕೆಜೆಪಿಯಿಂದ ಬಿಜೆಪಿಗೆ ವಾಪಸಾಗಿರುವ ತಮ್ಮ ಬೆಂಬಲಿಗರ ಕುರಿತು ಮಾತನಾಡಿದ ಅವರು, ನನ್ನ ಬೆಂಬಲಿರಿಗೆ ಸ್ಥಾನಮಾನ ನೀಡುವ ಕುರಿತು ವರಿಷ್ಠರೊಂದಿಗೆ ಚರ್ಚಿಸಿದ್ದೇನೆ. ಶೀಘ್ರದಲ್ಲಿಯೇ ಅವರು ಅಗತ್ಯ ಕ್ರಮ ಕೈಗೊಳ್ಳಲ್ಲಿದ್ದಾರೆ ಎಂದು ಹೇಳಿದರು.