ಮತ್ತೆ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ
ನವದೆಹಲಿ: ಕೇಂದ್ರ ಸರ್ಕಾರವು ನೌಕರರ ತುಟ್ಟಿ ಭತ್ಯೆಯನ್ನು ಶೇ. 10ರಷ್ಟು ಹೆಚ್ಚಿಸಲಿದ್ದು, ಇದರೊಂದಿಗೆ ತುಟ್ಟಿ ಭತ್ಯೆ ಬರೋಬ್ಬರಿ ಶೇ.100ಕ್ಕೇರಲಿದೆ.
ಈ ಸವಲತ್ತು ಸುಮಾರು ಐವತ್ತು ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು ಮೂವತ್ತು ಲಕ್ಷ ಪಿಂಚಣಿದಾರರು ಪಡೆಯಲಿದ್ದಾರೆ. ಕೇಂದ್ರ ಸರ್ಕಾರವು ಒಂದು ವರ್ಷದಲ್ಲಿ ಎರಡನೇ ಬಾರಿಗೆ ತುಟ್ಟಿ ಭತ್ಯೆಯನ್ನು ಶೇ.10ರಷ್ಟು ಹೆಚ್ಚಿಸಿದೆ.
ಇದಕ್ಕೂ ಮುನ್ನ 2013ರ ಸೆಪ್ಟೆಂಬರ್ ತಿಂಗಳ ಜುಲೈ 1ರಿಂದಲೇ ಅನ್ವಯವಾಗುವಂತೆ ಶೇ.10ರಷ್ಟು ತುಟ್ಟಿ ಭತ್ಯೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿತ್ತು. ಈ ಬಾರಿ 2014ರ ಜನವರಿ 1 ರಿಂದಲೇ ಜಾರಿಗೆ ಬರುವಂತೆ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.