ಕೇಜ್ರಿವಾಲ್ ಸರ್ಕಾರ ಬೀಳಿಸಲು ಬಿಜೆಪಿ ಯತ್ನ: ಆಪ್
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ..
ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ(ಎಎಪಿ), ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ಬೀಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದೆ.
ಬಿಜೆಪಿ ನಾಯಕರಾದ ನರೇಂದ್ರ ಮೋದಿ, ಅರುಣ್ ಜೇಟ್ಲಿ, ಹಾಗೂ ಹರ್ಷವರ್ಧನ್ ಅವರು ದೆಹಲಿ ಸರ್ಕಾರ ಬೀಳಿಸಲು ಮಾಧ್ಯಮದವರ ಜೊತೆ ಸೇರಿ ಷಡ್ಯಂತ್ರ ರೂಪಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಆಪ್ನಲ್ಲಿ ಭಿನ್ನಮತ ಸ್ಫೋಟಕ್ಕೆ ಬಿಜೆಪಿ ನಾಯಕರೇ ಕಾರಣ ಎಂದು ದೂರಿದ್ದಾರೆ.
ಯಾವುದೇ ಸರ್ಕಾರ ಮಾಡದಷ್ಟು ಅಭಿವೃದ್ಧಿಯನ್ನು ನಮ್ಮ ಸರ್ಕಾರ ಮಾಡಿದೆ. ಹೀಗಾಗಿ ಆಪ್ ಸರ್ಕಾರದ ಅಭಿವೃದ್ಧಿ ಹಾಗೂ ಜನಪ್ರಿಯತೆ ಸಹಿಸಿಕೊಳ್ಳಲಾಗದೇ ಬಿಜೆಪಿ ನಾಯಕರು ನಮ್ಮ ಸರ್ಕಾರಕ್ಕೆ ಕಳಂಕ ತರಲು ಯತ್ನಿಸುತ್ತಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ.