ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಅಧಿಕಾರಿಗಳು

ರು. 80 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಅಧಿಕಾರಿಗಳು ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ...

Mainashree
Updated On : 3 Feb 2014, 6:44 am

ಬೆಂಗಳೂರು: ರು. 80 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಅಧಿಕಾರಿಗಳು ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ.

ರು. 80 ಸಾವಿರ ಲಂಚಸ್ವೀಕರಿಸುತ್ತಿದ್ದ ವೇಳೆ ಬಿಬಿಎಂಪಿ ಅಧಿಕಾರಿಗಳನ್ನು ಸೋಮವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬಿಬಿಎಂಪಿ 180 ನೇ ವಾರ್ಡ್ ಸಹಾಯಕ ಇಂಜಿನಿಯರ್ ರಾಮು ಹಾಗೂ ವರ್ಕ್ ಇನ್ಸ್‌ಪೆಕ್ಟರ್ ಸೈಯದ್ ಇಬ್ರಾಹಿಂ 80 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮನೆ ಡೆಮಾಲಿಷನ್ ನೋಟಿಸ್ ರದ್ದು ಸಂಬಂಧ 80 ಸಾವಿರ ಲಂಚ ನೀಡುವಂತೆ ಅಧಿಕಾರಿಗಳು ಒತ್ತಾಯಿಸಿದ್ದಾರೆ ಎಂದು ಜರಗನಹಳ್ಳಿಯ ಮೊಹಮದ್ ಅಹ್ಮದ್ ಎಂಬುವವರು ದೂರು ಸಲ್ಲಿಸಿದ್ದರು. ಇಂದು ಬಿಬಿಎಂಪಿ ಕಚೇರಿ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ನಾರಾಯಣ್ ಹಾಗೂ ಇನ್ಸ್‌ಪೆಕ್ಟರ್ ಮುಕ್ರಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement