ಎಎಪಿ ಹವ್ಯಾಸಿ ಸುಳ್ಳುಗಾರರ ಪಕ್ಷ: ಜೇಟ್ಲಿ
ಆಮ್ ಆದ್ಮಿ ಪಕ್ಷ ತಮ್ಮ ನಿವಾಸದ ಮುಂದೆ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಖಾರವಾಗಿಯೇ..
ನವದೆಹಲಿ: ಆಮ್ ಆದ್ಮಿ ಪಕ್ಷ ತಮ್ಮ ನಿವಾಸದ ಮುಂದೆ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರು, ಆಪ್ ಪ್ರತಿಭಟನೆ ಕೇವಲ ರಾಜಕೀಯ ತಂತ್ರ ಅಷ್ಟೇ ಎಂದು ಹೇಳಿದ್ದಾರೆ.
ಆಪ್ ಕಾರ್ಯಕರ್ತರ ಪ್ರತಿಭಟನೆಯನ್ನು ಟೀಕಿಸಿದ ಜೇಟ್ಲಿ, ಅವರು ಪ್ರತಿಭಟನೆ ಮತ್ತು ಧರಣಿ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಅವರಿಗೆ ಸರ್ಕಾರ ನಡೆಸಲು ಬರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಆಪ್ ಒಂದು 'ಹವ್ಯಾಸಿ ಸುಳ್ಳುಗಾರರ ಪಕ್ಷ' ಎಂದಿದ್ದಾರೆ.
ಕೇಜ್ರಿವಾಲ್ ಸರ್ಕಾರ ಬೀಳಿಸಲು ಬಿಜೆಪಿ ನಾಯಕರಾದ ನರೇಂದ್ರ ಮೋದಿ, ಅರುಣ್ ಜೇಟ್ಲಿ ಹಾಗೂ ಹರ್ಷವರ್ಧನ್ ಅವರು 20 ಕೋಟಿ ರುಪಾಯಿ ಆಮಿಷ ಒಡ್ಡಿದ್ದಾರೆ ಎಂದು ಆಪ್ ಶಾಸಕ ಮದನ್ ಲಾಲ್ ಅವರು ಆರೋಪಿಸಿದ್ದಾರೆ.
ಕೆಲ ದಿನಗಳ ಹಿಂದೆ ಭೇಟಿಯಾಗಿದ್ದ ಮೋದಿ ಬೆಂಬಲಿಗರಿಬ್ಬರು 10 ಶಾಸಕರ ಬೆಂಬಲದೊಂದಿಗೆ ಪಕ್ಷ ಒಡೆದರೆ ಸಿಎಂ ಗದ್ದುಗೆಯಲ್ಲಿ ಕೂರಿಸುವ ಭರವಸೆ ನೀಡಿದ್ದರು ಎಂದು ಮದನ್ಲಾಲ್ ಮಾಹಿತಿ ನೀಡಿದ್ದಾರೆ. ದೆಹಲಿ ಅಸೆಂಬ್ಲಿ ಚುನಾವಣೆ ಫಲಿತಾಂಶಕ್ಕೂ ಮುನ್ನ ಡಿ.7ರ ಮಧ್ಯರಾತ್ರಿ ಕರೆ ಬಂದಿತ್ತು. ಆ ಕಡೆಯಿಂದ ಮಾತನಾಡಿದ ವ್ಯಕ್ತಿ ಪ್ರಮುಖ ಮುಖಂಡನೊಬ್ಬ ನಿಮ್ಮ ಬಳಿ ಮಾತನಾಡಲು ಬಯಸಿದ್ದಾರೆ ಎಂದಿದ್ದ. ಯಾರೆಂದು ಕೇಳಿದ್ದಕ್ಕೆ ಅರುಣ್ ಜೇಟ್ಲಿ ಹೆಸರು ಹೇಳಿದ್ದ. ಜೇಟ್ಲಿ ಹೆಸರು ಕೇಳುತ್ತಲೇ ನಾನು ಸಿಟ್ಟಿನಿಂದ ಕರೆ ಕಟ್ ಮಾಡಿದ್ದೆ. ಈ ವಿಚಾರವನ್ನು ಪಕ್ಷದ ಹೈಕಮಾಂಡ್ಗೂ ತಿಳಿಸಿದ್ದೇನೆ ಎಂದು ಮದನ್ಲಾಲ್ ಮಾಹಿತಿ ನೀಡಿದ್ದಾರೆ. ಆದರೆ, ಈ ಆರೋಪ ಪುಷ್ಟೀಕರಿಸುವ ಯಾವುದೇ ದಾಖಲೆ ತಮ್ಮ ಬಳಿ ಇಲ್ಲ ಎಂದು ಮದನ್ಲಾಲ್ ಸ್ಪಷ್ಟಪಡಿಸಿದ್ದಾರೆ.