ಸಂಸತ್ತಿನಲ್ಲಿ ತೆಲಂಗಾಣ ಮಸೂದೆ ಅಂಗೀಕಾರ: ಪ್ರಧಾನಿ ವಿಶ್ವಾಸ
ತೀವ್ರ ವಿರೋಧದ ನಡುವೆಯೂ ನಾಳೆಯಿಂದ ಆರಂಭವಾಗುವ ಸಂಸತ್ ಅಧಿವೇಶನದಲ್ಲಿ ಪ್ರತ್ಯೇಕ ತೆಲಂಗಾಣ ಮಸೂದೆ..
ನವದೆಹಲಿ: ತೀವ್ರ ವಿರೋಧದ ನಡುವೆಯೂ ನಾಳೆಯಿಂದ ಆರಂಭವಾಗುವ ಸಂಸತ್ ಅಧಿವೇಶನದಲ್ಲಿ ಪ್ರತ್ಯೇಕ ತೆಲಂಗಾಣ ಮಸೂದೆಯನ್ನು ಅಂಗೀಕರಿಸುವುದಾಗಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭ್ರಷ್ಟಾಚಾರ ವಿರೋಧಿ ಮಸೂದೆ ಹಾಗೂ ಕೋಮು ಗಲಭೆ ತಡೆ ಮಸೂದೆ ಸೇರಿದಂತೆ ಹಲವು ಮಸೂದೆಗಳು ಈ ಬಾರಿ ಸಂಸತ್ತಿನಲ್ಲಿ ಚರ್ಚೆಗೆ ಬರಲಿವೆ. ಆದರೆ ತೆಲಂಗಾಣ ಮಸೂದೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.