ಸಿಎನ್‌ಆರ್ ರಾವ್, ಸಚಿನ್‌ಗೆ 'ಭಾರತ ರತ್ನ' ಪ್ರದಾನ
ಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿಎನ್‌ಆರ್ ರಾವ್ ಹಾಗೂ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಮಂಗಳವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ..
ನವದೆಹಲಿ: ಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿಎನ್‌ಆರ್ ರಾವ್ ಹಾಗೂ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಮಂಗಳವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ಪ್ರಥಮ ಪ್ರಜೆ ಪ್ರಣಬ್ ಮುಖರ್ಜಿ ಅವರು, ದೇಶದ ಎರಡು ರತ್ನಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಕ್ರೀಡಾ ಕ್ಷೇತ್ರದಲ್ಲಿನ ಅಪೂರ್ವ ಸಾಧನೆಗಾಗಿ ಸಚಿನ್ ತೆಂಡೂಲ್ಕರ್ ಅವರಿಗೆ ಹಾಗೂ ವಿಜ್ಞಾನ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗಾಗಿ ಸಿಎನ್‌ಆರ್ ರಾವ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.