ತೆಲಂಗಾಣ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ
15ನೇ ಲೋಕಸಭೆಯ ಕೊನೆಯ ಅಧಿವೇಶನ ಬುಧವಾರ ಆರಂಭವಾಗಿದ್ದು, ಸದನ ಆರಂಭವಾಗುತ್ತಿದ್ದಂತೆ ಪ್ರತ್ಯೇಕ ತೆಲಂಗಾಣ ವಿವಾದ..
ನವದೆಹಲಿ: 15ನೇ ಲೋಕಸಭೆಯ ಕೊನೆಯ ಅಧಿವೇಶನ ಬುಧವಾರ ಆರಂಭವಾಗಿದ್ದು, ಸದನ ಆರಂಭವಾಗುತ್ತಿದ್ದಂತೆ ಪ್ರತ್ಯೇಕ ತೆಲಂಗಾಣ ವಿವಾದ ಸಂಸತ್ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು.
ಲೋಕಸಭೆಯಲ್ಲಿ ಸೀಮಾಂಧ್ರ ಸಂಸದರು ತೆಲಂಗಾಣ ಮಸೂದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಅಲ್ಲದೆ ಆಂಧ್ರಪ್ರದೇಶ ವಿಭಜನೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಆದರೆ ಇದಕ್ಕೆ ಸ್ಪೀಕರ್ ಮೀರಾ ಕುಮಾರ್ ಅವರು ಅನುಮತಿ ನೀಡದೇ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.
ಇನ್ನು ರಾಜ್ಯಸಭೆಯಲ್ಲೂ ತೆಲಂಗಾಣ ವಿಚಾರವಾಗಿ ಭಾರಿ ಗದ್ದಲ ಏರ್ಪಟ್ಟಿತು. ಇದರಿಂದ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿದೆ.
ಇಂದು ಬೆಳಗ್ಗೆಯಷ್ಟೆ ಮಾತನಾಡಿದ್ದ ಪ್ರಧಾನಿ ಮನಮೋಹನ್ ಸಿಂಗ್ ಅವರು, ಈ ಅಧಿವೇಶನವನ್ನು ಐತಿಹಾಸಿಕ ಅಧಿವೇಶನ ಮಾಡುವ ಉದ್ದೇಶವಿದೆ. ತೆಲಂಗಾಣ ಮಸೂದೆ ಸೇರಿದಂತೆ ಎಲ್ಲ ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಸಹಕರಿಸುವಂತೆ ಎಲ್ಲ ರಾಜಕೀಯ ಪಕ್ಷಗಳಿಗು ಮನವಿ ಮಾಡಿದ್ದರು.