ಬಳ್ಳಾರಿಯಿಂದ ಲೋಕಸಭೆಗೆ ಸ್ಪರ್ಧೆ: ಶ್ರೀರಾಮುಲು
ಪಕ್ಷದ ಕಾರ್ಯಕರ್ತರು ಬಯಸಿದರೆ ಬಳ್ಳಾರಿಯಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತಾವು ಸಿದ್ಧ ಎಂದು ಬಿಎಸ್ಆರ್..
ಬಳ್ಳಾರಿ: ಪಕ್ಷದ ಕಾರ್ಯಕರ್ತರು ಬಯಸಿದರೆ ಬಳ್ಳಾರಿಯಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತಾವು ಸಿದ್ಧ ಎಂದು ಬಿಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಬಿ.ಶ್ರೀರಾಮುಲು ಅವರು ಬುಧವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷಗಳೊಂದಿಗೆ ಬಿಎಸ್ಆರ್ ಕಾಂಗ್ರೆಸ್ ವಿಲೀನವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಬಿಎಸ್ಆರ್ ಕಾಂಗ್ರೆಸ್ ಸ್ಪತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಐದು ಲೋಕಸಭಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ. ಬಳ್ಳಾರಿ, ರಾಯಚೂರು, ಚಿತ್ರದುರ್ಗ, ಕೊಪ್ಪಳ, ಮತ್ತು ಹಾವೇರಿಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಕಣಕ್ಕಿಳಿಯಲಿದೆ ಎಂದಿದ್ದಾರೆ.