ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿ ಮುಂದುವರಿಯುವುದು: ಸೋನಿಯಾ

ಕಾಂಗ್ರೆಸ್ ನೇತಾರ ಜನಾರ್ಧನ ದ್ವಿವೇದಿ ಅವರು ಜಾತಿ ಆಧಾರದಲ್ಲಿ ಮೀಸಲಾತಿಯನ್ನು ನಿಲ್ಲಿಸಬೇಕೆಂದು ಹೇಳಿಕೆ ನೀಡಿ ಬೆನ್ನಲ್ಲೇ ಕಾಂಗ್ರೆಸ್ ...

Rashmi Kasaragodu
Updated On : 6 Feb 2014, 3:07 am

ನವದೆಹಲಿ: ಕಾಂಗ್ರೆಸ್ ನೇತಾರ ಜನಾರ್ಧನ ದ್ವಿವೇದಿ ಅವರು ಜಾತಿ ಆಧಾರದಲ್ಲಿ ಮೀಸಲಾತಿಯನ್ನು ನಿಲ್ಲಿಸಬೇಕೆಂದು ಹೇಳಿಕೆ ನೀಡಿ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮೀಸಲಾತಿ ಮುಂದುವರಿಯಲಿದೆ ಎಂದು ಹೇಳಿಕೆ ನೀಡಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ನಾವು ಮೀಸಲಾತಿ ವ್ಯವಸ್ಥೆಯನ್ನು ತಂದಿದ್ದೇವೆ. ನಾವು ಯಾವುದೇ ಕಾರಣಕ್ಕೂ ಇದನ್ನು ನಿಲ್ಲಿಸುವುದಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಇಂಥಾ ಮೀಸಲಾತಿಗಳನ್ನು ಕಾಂಗ್ರೆಸ್ಸೇ ಆರಂಭಿಸಿದ್ದು. ಹಿಂದುಳಿದ ವರ್ಗದ ಜನರ ಸಬಲೀಕರಣಕ್ಕಾಗಿಯೇ ಈ ಮೀಸಲಾತಿಯನ್ನು ನೀಡಲಾಗಿದೆ ಎಂದು ಉಲ್ಲೇಖಿಸಿ ಸೋನಿಯಾ ಎರಡು ಪುಟಗಳ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಏತನ್ಮಧ್ಯೆ, ದ್ವಿವೇದಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ದ್ವಿವೇದಿ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ ಎಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement