ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದೆಹಲಿ ಸಿಎಂ ಸೇರಿ ನಾಲ್ವರಿಗೆ ಸುಪ್ರೀಂ ನೋಟೀಸ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ನಾಲ್ವರು ಆಮ್ ಆದ್ಮಿ ಪಕ್ಷದ ಮುಖಂಡರಿಗೆ ಸುಪ್ರೀಂಕೋರ್ಟ್ ಶುಕ್ರವಾರ...

Mainashree
Updated On : 7 Feb 2014, 12:16 pm

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ನಾಲ್ವರು ಆಮ್ ಆದ್ಮಿ ಪಕ್ಷದ ಮುಖಂಡರಿಗೆ ಸುಪ್ರೀಂಕೋರ್ಟ್ ಶುಕ್ರವಾರ ನೋಟೀಸ್ ಜಾರಿಮಾಡಿದೆ.

ಕೇಂದ್ರ ಸಚಿವ ಕಪಿಲ್ ಸಿಬಲ್ ಅವರ ಪುತ್ರ ಅಮಿತ್ ಸಿಬಲ್ ಅವರು ಕೇಜ್ರಿವಾಲ್ ಸೇರಿದಂತೆ ನಾಲ್ವರು ಆಪ್ ಮುಖಂಡರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ, ಇದಕ್ಕೆ ಪ್ರತಿಕ್ರಯಿಸುವಂತೆ ಆದೇಶಿಸಿ, ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಪ್ರಶಾಂತ ಭೂಷಣ ಹಾಗೂ ಶಾಜಿಯಾ ಇಲ್ಮಿಗೆ ಸುಪ್ರೀಂ ಕೋರ್ಟ್‌ನಿಂದ ನೋಟೀಸ್ ಜಾರಿಯಾಗಿದೆ.

ವೋಡಾಫೋನ್ ತೆರಿಗೆ ಪ್ರಕರಣದಲ್ಲಿ ಕಪಿಲ್ ಸಿಬಲ್ ಅವರು ಭಾಗಿಯಾಗಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ದೆಹಲಿ ವಿಧಾನ ಸಭೆಯ ಚುನಾವಣಾ ಫಲಿತಾಂಶ ಪ್ರಕಟಣೆಗೊಳ್ಳುವ ಮೊದಲೇ ಕೇಜ್ರಿವಾಲ್ ಸೇರಿದಂತೆ ನಾಲ್ವರ ಸಚಿವರ ವಿರುದ್ಧ ಅಮಿತ್ ಸಿಬಲ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement