ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ ಕಾಂಗ್ರೆಸ್ ಭ್ರಷ್ಟಾಚಾರದ ಪರವಾಗಿವೆ: ಕೇಜ್ರಿವಾಲ್

ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಪರವಾಗಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

Mainashree
Updated On : 7 Feb 2014, 2:30 am

ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಪರವಾಗಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ಪೊಲೀಸರು ಭ್ರಷ್ಟತೆಯಲ್ಲಿ ಹೆಚ್ಚಾಗಿ ತೊಡಗಿದ್ದಾರೆ. ಇದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರ ಸಹಕಾರ ನೀಡುತ್ತಿವೆ ಎಂದ ಅವರು, ಇಂತಹ ಭ್ರಷ್ಟಾಚಾರಿಗಳನ್ನು ಮಟ್ಟ ಹಾಕದೇ ಬಿಡುವುದಿಲ್ಲ ಎಂದು ಕೇಜ್ರಿವಾಲ್ ಎಚ್ಚರಿಸಿದ್ದಾರೆ.

ಲೈಸೆನ್ಸ್ ಮತ್ತು ಪರ್ಮಿಟ್ ನೀಡಲು ಆಟೋ ಚಾಲಕರಿಂದ ಪೊಲೀಸರು ಲಂಚ ಸ್ವೀಕರಿಸುತ್ತಿದ್ದಾರೆ. ಭ್ರಷ್ಟ ಪೊಲೀಸರ ಬಗ್ಗೆ ಸ್ಟಿಂಗ್ ಆಪರೇಷನ್ ನಡೆಸಿ, ಲಂಚ ತೆಗೆದುಕೊಳ್ಳುವವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಭ್ರಷ್ಟಾಚಾರಿಗಳನ್ನು ಮಟ್ಟ ಹಾಕಲು ಎಎಪಿ ಸರ್ಕಾರ ಜನಲೋಕಪಾಲ ಮಸೂದೆ ಜಾರಿ ಮಾಡುತ್ತದೆ. ಎಎಪಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸಲಾಗುತ್ತಿದೆ. ಆದರೆ ಎಎಪಿ ಸರ್ಕಾರ ಇದಕ್ಕೆ ಆಸ್ಪದಕೊಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement