ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜನಲೋಕಪಾಲಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧ: ಕೇಜ್ರಿವಾಲ್

ಭ್ರಷ್ಟಾಚಾರ ನಿರ್ಮೂಲನೆಗಾಗಿರುನ ಜನಲೋಕಪಾಲ ಮಸೂದೆ ಜಾರಿಗಾಗಿ ತಾನು ಏನು ಬೇಕಾದರು ಮಾಡಲು ಸಿದ್ಧ ...

Rashmi Kasaragodu
Updated On : 8 Feb 2014, 5:36 am

ನವದೆಹಲಿ: ಭ್ರಷ್ಟಾಚಾರ ನಿರ್ಮೂಲನೆಗಾಗಿರುನ ಜನಲೋಕಪಾಲ ಮಸೂದೆ ಜಾರಿಗಾಗಿ ತಾನು ಏನು ಬೇಕಾದರು ಮಾಡಲು ಸಿದ್ಧ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಭಷ್ಟಾಚಾರ ಅತೀ ದೊಡ್ಡ ಸಮಸ್ಯೆಯಾಗಿದ್ದು, ಇದರ ನಿರ್ಮೂಲನೆಗಾಗಿ ನಾನು ಏನು ಬೇಕಾದರು ಮಾಡುತ್ತೇನೆ ಎಂದು ಪಿಟಿಐ ಸಂಪಾದಕರೊಂದಿಗಿನ ಸಂವಾದದಲ್ಲಿ ಕೇಜ್ರಿವಾಲ್ ಹೇಳಿದ್ದಾರೆ.

ಇದಕ್ಕಾಗಿ ನೀವು ರಾಜಿನಾಮೆ ನೀಡಬೇಕಾಗಿ ಬಂದರೆ? ಎಂಬ ಪ್ರಶ್ನೆಗೆ ಕೇಜ್ರಿವಾಲ್, ತಾನು ಯಾವ ಹಂತಕ್ಕೆ ಬೇಕಾದರೂ ಹೋದೆನು ಎಂದು ಉತ್ತರಿಸಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಮಸೂದೆ ಅಂಗೀಕಾರಕ್ಕೆ ಅನುಮತಿಸುವುದಿಲ್ಲ ಎಂದು ಹೇಳಿದ ಕೇಜ್ರಿವಾಲ್, ದೆಹಲಿ ಸರ್ಕಾರ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ತೀರ್ಮಾನಿಸಿದೆ ಎಂದು ಹೇಳಿದ್ದಾರೆ. ಅದೇ ವೇಳೆ ಕಳೆದ 7 ವರ್ಷಗಳಿಂದ ದೆಹಲಿ ಮುನ್ಸಿಪಲ್ ಕಾರ್ಪರೇಷನ್‌ನಲ್ಲಿ ಬಿಜೆಪಿಯ ಅವ್ಯವಹಾರದ ಬಗ್ಗೆಯೂ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ.

ಜನಲೋಕಪಾಲ ಮಸೂದೆಯನ್ನು ಜಾರಿಗೆ ತರುವುದು ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಮೊದಲ ಆದ್ಯತೆಯಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement