ಬೆಂಗಳೂರಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಿಡ್ನಾಪ್?
ನಗರದ ಕೋರಮಂಗಲದ ಜ್ಯೋತಿನಿವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ...
ಬೆಂಗಳೂರು: ನಗರದ ಕೋರಮಂಗಲದ ಜ್ಯೋತಿನಿವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದಾಳೆಂದು ಮೂಲಗಳು ತಿಳಿಸಿವೆ.
ಆಂಧ್ರಪ್ರದೇಶ ಮೂಲದ ಜೈನಬ್(16) ವಿದ್ಯಾರ್ಥಿನಿ ನಾಪತ್ತೆಯಾಗಿದ್ದಾಳೆ. ನಿನ್ನೆ ಸಂಜೆ 7.30ರಿಂದ ನಾಪತ್ತೆಯಾಗಿದ್ದಾಳೆಂದು ಜೈನಬ್ ಪೋಷಕರು ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ತಂದೆ ಟಿ ಜವರಲಾಲ್ ಅವರಿಗೆ ಕರೆ ಮಾಡಿದ ಜೈನಬ್, ನನ್ನನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಮುಂಬೈಗೆ ಕರೆತಂದಿದ್ದಾರೆ ಎಂದು ತಿಳಿಸಿದ್ದಾಳೆ.
ಜೈನಬ್ಳನ್ನು ಕಿಡ್ನಾಪ್ ಮಾಡಿದ್ದಾರೆಂದು ಪೋಷಕರು ಶಂಕಿಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.