ಫೆ.15ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ
ಫೆಬ್ರವರಿ 15 ಮತ್ತು 16ರಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ...
ಬೆಂಗಳೂರು: ಫೆಬ್ರವರಿ 15 ಮತ್ತು 16ರಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಫೆಬ್ರವರಿ 15ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ರಾಹುಲ್ ಭಾಗವಹಿಸಿ, ತದ ನಂತರ ರೋಡ್ ಶೋ ಮೂಲಕ ಮೈಸೂರಿಗೆ ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತುಮಕೂರಿನಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದು, ಫೆಬ್ರವರಿ 16ರಂದು ಮಾದ್ಯಮಗಳೊಂದಿಗೆ ಸಂವಾದ ನಡೆಸಲಿದ್ದಾರೆ.