ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ: ಮೇಯಪ್ಪನ್ ತಪ್ಪಿತಸ್ಥ
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ...
ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ ಸಂಬಂಧಿಸಿದಂತೆ ನ್ಯಾಯಾಮೂರ್ತಿ ಮುಖುಲ್ ಮುಗ್ದಲ್ ಸಮಿತಿ ರಚಿಸಿರುವ ತನಿಖಾ ವರದಿಯಲ್ಲಿ ಗುರುನಾಥ್ ಮೇಯಪ್ಪನ್ ತಪ್ಪಿತಸ್ಥ ಎಂದು ಉಲ್ಲೇಖಿಸಲಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನ್ಯಾಯಾಮೂರ್ತಿ ಮುಖುಲ್ ಮುಗ್ದಲ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿತ್ತು. ಸಮಿತಿ ರಚಿಸಿದ ತನಿಖೆ ವರದಿ ಪ್ರಕಾರ ಹಗರಣದಲ್ಲಿ ಗುರುನಾಥ್ ಮೇಯಪ್ಪನ್ ಭಾಗಿಯಾಗಿರುವುದಾಗಿ ತಿಳಿದು ಬಂದಿದೆ.
ಇಂದು ನಾ. ಮುದ್ಗಲ್ ಅವರು ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದಾರೆ.
ಹಗರಣದಲ್ಲಿ ರಾಜ್ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ಅವರು ಆರೋಪದ ಬಗ್ಗೆ ಮುಂದಿನ ತನಿಖೆ ನಂತರ ತಿಳಿಸಲಾಗುತ್ತದೆ ಎಂದು ಸಮಿತಿ ತಿಳಿಸಿದೆ.