ಡಿನೋಟಿಫಿಕೇಶನ್ ಪ್ರಕರಣ ರದ್ದು ಕೋರಿ ಬಿಎಸ್‌ವೈ "ಸುಪ್ರೀಂ'ಗೆ ಮನವಿ
ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಮಾಜಿ ಸಿಎಂ..
ಬೆಂಗಳೂರು: ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ವಕೀಲ ಸಿರಾಜಿನ್ ಪಾಷಾ ಅವರು ಲೋಕಾಯುಕ್ತ ನ್ಯಾಯಾಲಯದಲ್ಲಿ ದಾಖಲಿಸಿದ್ದ 2 ಪ್ರಕರಣಗಳನ್ನು ರದ್ದು ಗೊಳಿಸಬೇಕು ಎಂದು ಬಿಎಸ್ ಯಡಿಯೂರಪ್ಪ ಅವರ ಮನವಿ ಮಾಡಿದ್ದಾರೆ. ಯಡಿಯೂರಪ್ಪ ಅವರ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡ ನ್ಯಾಯಾಲಯ ಈ ಬಗ್ಗೆ ವಿವರ ನೀಡುವಂತೆ ವಕೀಲ ಸಿರಾಜಿನ್ ಪಾಷಾ ಮತ್ತು ರಾಜ್ಯ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ್ದಾರೆ.
ರಾಚೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ ಮತ್ತು ಪ್ರೇರಣ ಎಜುಕೇಷನ್ ಟ್ರಸ್ಟ್ ಅಕ್ರಮ ದೇಣಿಗೆ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ 2 ಖಾಸಗಿ ದೂರುಗಳು ದಾಖಲಾಗಿದ್ದವು. ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ನ್ಯಾಯಾಲಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರರಾದ ಬಿವೈ ರಾಘವೇಂದ್ರ, ಬಿವೈ ವಿಜಯೇಂದ್ರ ಅವರಿಗೆ ವಾರಂಟ್ ಜಾರಿ ಮಾಡಿತ್ತು.