ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದೋಣಿ ದುರಂತ: ಮೃತರ ಸಂಖ್ಯೆ 24ಕ್ಕೇರಿಕೆ

Vishwanath S
Updated On : 10 Feb 2014, 4:51 am

ಭುವನೇಶ್ವರ್: ಸಂಬಲ್ಪುರ ನಗರದ ಹಿರಾಕುಡ್ ಸಮುದ್ರದಲ್ಲಿ 90 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮುಳುಗಡೆ ಹಿನ್ನೆಲೆಯಲ್ಲಿ ಸೋಮವಾರ ಮೃತರ ಸಂಖ್ಯೆ 24ಕ್ಕೇರಿದ್ದು, ಇನ್ನು ಏಳು ಮಂದಿ ನಾಪತ್ತೆಯಾಗಿದ್ದಾರೆ.

ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಹಿರಾಕುಡ್ ಸಮುದ್ರದಲ್ಲಿ ನಿನ್ನೆ ದೋಣಿ ದುರಂತ ಸಂಭವಿಸಿತ್ತು. ಹೀಗಾಗಿ ನೀರಿನಲ್ಲಿ ಮುಳುಗಿ ಸುಮಾರು 12 ಮಂದಿ ಜಲಸಮಾಧಿಯಾಗಿದ್ದು, ಹಲವರು ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ನಡೆದ ರಕ್ಷಣಾ ಕಾರ್ಯಾಚರಣೆ ವೇಳೆ ಸುಮಾರು 12 ಮಂದಿ ಮೃತದೇಹ ಪತ್ತೆಯಾಗಿತ್ತು.

ಇಂದು ಕಾರ್ಯಾಚರಣೆ ಮುಂದುವರೆಸಿದ್ದ ಅಗ್ನಿ ಶಾಮಕ ದಳ ಮತ್ತು ಒಡಿಶಾ ಕ್ಷಿಪ್ರ ಕಾರ್ಯಚರಣೆ ಪಡೆ 12 ಮಂದಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಹೀಗಾಗಿ ಸದ್ಯ ಮೃತರ ಸಂಖ್ಯೆ 24ಕ್ಕೇರಿಕೆಯಾಗಿದೆ. ಇದರಲ್ಲಿ ಇನ್ನು 7 ಮಂದಿ ನಾಪತ್ತೆಯಾಗಿದ್ದು, ಸತ್ತವರ ಸಂಖ್ಯೆ ಹೆಚ್ಚಾಗುವ ಸಂಭವ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಲಯನ್ಸ್ ಕ್ಲಬ್ ವತಿಯಿಂದ ಪ್ರವಾಸಕ್ಕೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ದೋಣಿಯ ಸಾಮರ್ಥ್ಯಕ್ಕಿಂತ ಹೆಚ್ಚು ಮಂದಿ ಪ್ರಯಾಣಿಸುತ್ತಿದದ್ದೇ ಈ ಅವಘಡಕ್ಕೆ ಕಾರಣ ಎಂದು ಒಡಿಶಾ ರಾಜ್ಯದ ವಿಶೇಷ ಪರಿಹಾರ ಆಯುಕ್ತ ಪ್ರದೀಪ್ತ ಮಹಾಪಾತ್ರ ಹೇಳಿದ್ದರು.

ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 1.50 ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ಘೋಷಿಸಿತ್ತು. ಅಲ್ಲದೆ ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೆ ಭರಿಸುವುದಾಗಿ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement