ಫೆ.17ರಂದು ಬಿಬಿಎಂಪಿ ಬಜೆಟ್ ಮಂಡನೆ
2014-15ನೇ ಸಾಲಿನ ಬಜೆಟ್ ಮಂಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧವಾಗಿದ್ದು, ಫೆಬ್ರವರಿ 17 ರಂದು ಆರ್ಥಿಕ...
ಬೆಂಗಳೂರು: 2014-15ನೇ ಸಾಲಿನ ಬಜೆಟ್ ಮಂಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿದ್ಧವಾಗಿದ್ದು, ಫೆಬ್ರವರಿ 17 ರಂದು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಡಾ. ಶಿವಪ್ರಸಾದ್ ಬಜೆಟ್ ಮಂಡಲಿಸಿದ್ದಾರೆ.
ರಾಜ್ಯ ಬಜೆಟ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 14ರಂದು ಮಂಡಿಸಲಿದ್ದು. ನಂತರ ಫೆ.17ರಂದು ಬಿಬಿಎಂಪಿ ಸುಮಾರು 7 ಸಾವಿರ ಕೋಟಿ ರುಪಾಯಿಗಳ ಬಜೆಟ್ ಮಂಡನೆ ಮಾಡಲಿದೆ. ಸದ್ಯ ಬಿಬಿಎಂಪಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಮುಂದಿನ ಬಜೆಟ್‌ನಲ್ಲಿ ಅದನ್ನು ಸರಿದೂಗಿಸಲು ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ವಿಶೇಷ ಅನುದಾನ ನೀಡುವ ಸಾಧ್ಯತೆ ಇದೆ.