ಸಿಖ್ ವಿರೋಧಿ ಗಲಭೆ: ಎಸ್ಐಟಿ ತನಿಖೆಗೆ ಜಂಗ್ ಒಪ್ಪಿಗೆ
1984ರಲ್ಲಿ ನಡೆದ ಸಿಖ್ ವಿರೋಧಿ ಗಲಭೆ ಪ್ರಕರಣವನ್ನು ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ)ಗೆ ಉಪ ರಾಜ್ಯಪಾಲ ನಜೀಬ್ ಜಂಗ್ ಸೋಮವಾರ ಒಪ್ಪಿಗೆ...
ನವದೆಹಲಿ: 1984ರಲ್ಲಿ ನಡೆದ ಸಿಖ್ ವಿರೋಧಿ ಗಲಭೆ ಪ್ರಕರಣವನ್ನು ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ)ಗೆ ಉಪ ರಾಜ್ಯಪಾಲ ನಜೀಬ್ ಜಂಗ್ ಸೋಮವಾರ ಒಪ್ಪಿಗೆ ನೀಡಿದ್ದಾರೆ.
ಸಿಖ್ ವಿರೋಧಿ ಪ್ರಕರಣವನ್ನು ಮರು ತನಿಖೆ ನಡೆಸಲು ಎಸ್ಐಟಿಗೆ ಅನುಮತಿ ನೀಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಳೆದ ವಾರ ಉಪ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಜೀಬ್ ಜಂಗ್ ಅವರು ಎಸ್ಐಟಿ ತನಿಖೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಕೇಜ್ರಿವಾಲ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಮನೀಶ್ ಸಿಸೋಡಿಯ ಅವರು, ಪತ್ತೆ ಮಾಡಲಾಗದೆ ಮುಚ್ಚಿ ಹಾಕಿರುವ ಪ್ರಕರಣಗಳ ಮರು ತನಿಖೆ ನಡೆಸುವ ಅಗತ್ಯವಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಪ್ರಥಮ ಮಾಹಿತಿ ವರದಿ(ಎಫ್ಐಆರ್) ದಾಖಲಿಸುವ ಅಗತ್ಯವಿದೆ ಎಂದರು.
ಈ ಸಂಬಂಧ ಇಂದು ಬೆಳಿಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಆಪ್ ಹಿರಿಯ ನಾಯಕರು ಸಿಖ್ ವಿರೋಧಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದ್ದಿದ್ದರು. ಈ ವೇಳೆ ರಾಜ್ಯಪಾಲರು ಎಸ್ಐಟಿ ತನಿಖೆಗೆ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.