ನಿಡೋ ತಾನಿಯಾ ಹತ್ಯೆ: ಸಿಬಿಐ ತನಿಖೆಗೆ ಶಿಂಧೆ ಆದೇಶ
ನವದೆಹಲಿ: ಅರುಣಾಚಲ್ ಪ್ರದೇಶದ ವಿದ್ಯಾರ್ಥಿ ನಿಡೋ ತಾನಿಯಾ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ.
ದೇಶದಲ್ಲಿ ನಿಡೋ ತಾನಿಯಾ ಪ್ರಕರಣ ಹೆಚ್ಚು ಕಾವು ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತನಿಕೆಯನ್ನು ಸಿಬಿಐಗೆ ಗೃಹ ಸಚಿವರು ಆದೇಶಿಸಿದ್ದಾರೆ.
ಇದಕ್ಕೂ ಮುನ್ನ ನಿಡೋ ತಾನಿಯಾ ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ.
ನಿಡೋ ತಾನಿಯಾ ಹತ್ಯೆ ಪ್ರಕರಣ ಸಂಬಂಧ ಮೂರು ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ತಲೆಮರೆಸಿಕೊಂಡಿದ್ದ ಇನ್ನು ಮೂವರು ಆರೋಪಿಗಳ ಪೈಕಿ ಓರ್ವನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನಿಡೋ ತಾನಿಯಾ ಹತ್ಯೆ ಪ್ರಕರಣ ದೇಶದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ಅಲ್ಲದೆ ಹಲವಾರು ವಿದ್ಯಾರ್ಥಿ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದವು.
ಕಾಂಗ್ರೆಸ್ ಶಾಸಕ ನಿಡೋ ಪಲ್ಲವಿ ಅವರ ಪುತ್ರ ನಿಡೋ ತಾನಿಯಾ ಅವರನ್ನು ದೆಹಲಿಯಲ್ಲಿ ಹತ್ಯೆ ಮಾಡಲಾಗಿತ್ತು.