ರಾಜ್ ಠಾಕ್ರೆ ಬಿಡುಗಡೆ: ನಾಳೆ ಚವ್ಹಾಣ್-ಠಾಕ್ರೆ ಭೇಟಿ
ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಇಂದು...
ಮುಂಬೈ: ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಇಂದು ಬಿಡುಗಡೆಗೊಳಿಸಲಾಗಿದ್ದು, ನಾಳೆ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಅವರನ್ನು ಠಾಕ್ರೆ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂನ ಠಾಕ್ರೆ ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಬಿಡುಗಡೆಯ ನಂತರ ಮಾತನಾಡಿದ ಠಾಕ್ರೆ, ನಾವು ರಾಜ್ಯದ ಜನತೆಗೆ ತೊಂದರೆ ಮಾಡುವ ಉದ್ದೇಶ ಹೊಂದಿಲ್ಲ. ಟೋಲ್ ವಸೂಲಾತಿಯಿಂದ ಜನರು ಪರದಾಡುತ್ತಿರುವುದನ್ನು ಸರ್ಕಾರ ಗಮನಿಸಬೇಕಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಎಷ್ಟೇ ಮನವಿ ಮಾಡಿದರು ಪ್ರಯೋಜನವಾಗಿರಲಿಲ್ಲ. ಆದ್ದರಿಂದ ನಾವು ಪ್ರತಿಭಟನೆ ನಡೆಸಿದ್ದೇವೆ. ಸರ್ಕಾರ ಜನರ ಸಮಸ್ಯೆಯನ್ನು ಅರಿಯುತ್ತಿಲ್ಲ ಎಂದು ಠಾಕ್ರೆ ಹೇಳಿದ್ದಾರೆ.
ಸುಂಕ ವಸೂಲಾತಿ ವ್ಯವಸ್ಥೆ ಬಗ್ಗೆ ಸರ್ಕಾರ ಕ್ರಮಕೈಗೊಳ್ಳಬೇಕಾಗಿದೆ. ಈ ವ್ಯವಸ್ಥೆಯನ್ನು ಸರಿಪಡಿಸಿದರೆ ಎಂಎನ್‌ಎಸ್ ಸಂಘಟನೆ ಹೋರಾಟವನ್ನು ನಿಲ್ಲಿಸುವುದು ಎಂದು ಅವರು ತಿಳಿಸಿದ್ದಾರೆ.