ಅಕ್ರಮ ಗಣಿಗಾರಿಕೆ: 12 ಅಧಿಕಾರಿಗಳ ವಿರುದ್ಧ ತನಿಖೆಗೆ ಸರ್ಕಾರದ ಅನುಮತಿ
ಬೆಂಗಳೂರು: ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ 12 ಅಧಿಕಾರಿಗಳ ವಿರುದ್ಧ ತನಿಖೆಗೆ ಸರ್ಕಾರ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಲೋಕಾಯುಕ್ತ ಕಚೇರಿಯಲ್ಲಿ ಮಾತನಾಡಿದ ನ್ಯಾ. ಭಾಸ್ಕರರಾವ್ ಅವರು, ಅಕ್ರಮ ಗಣಿಗಾರಿಕೆ ಸಂಬಂಧ 90 ಅಧಿಕಾರಿಗಳ ವಿರುದ್ಧ ತನಿಖೆ ಮಾಡಿದ್ದೆವು. ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾಗಿದೆ ಎಂದು ಹೇಳಿದ್ದಾರೆ.
194 ಅಧಿಕಾರಿಗಳ ನೇಮಕಾತಿ ಹಾಗೂ ಗಣಿಗಾರಿಕೆ ವಿಚಾರಣೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕಾಗಿ ಹೆಬ್ಬಾಳದ ಬಳಿ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ಥಳ ನೀಡುವಂತೆ ಸರ್ಕಾರ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.