'ದೇವದಾಸಿ ಪದ್ಧತಿ' ತಡೆಗೆ ಕ್ರಮ ಕೈಗೊಳ್ಳಿ: ಕರ್ನಾಟಕಕ್ಕೆ ಸುಪ್ರೀಂ ಸೂಚನೆ
ನವದೆಹಲಿ: ದೇವದಾಸಿ ಪದ್ಧತಿಯಿಂದ ಮಹಿಳೆಯನ್ನು ಮುಕ್ತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ಸರ್ಕಾರದ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚಿಸಿದೆ.
ಧಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉತ್ತರಂಗ ಮಾಲಾ ದುರ್ಗಾ ದೇವಸ್ಥಾನದಲ್ಲಿ ಮಹಿಳೆಯನ್ನು ದೇವದಾಸಿ ಪದ್ಧತಿಗೆ ದೂಡವಂತಹ ಆಚರಣೆ ನಡೆಸಲಾಗುತ್ತಿದೆ. ಇದಕ್ಕೆ ತಡೆ ಹಾಕುವಂತೆ ಕೋರಿ ಸರ್ಕಾರರೇತರ ಸಂಸ್ಥೆ ಎಸ್.ಎಲ್ ಫೌಂಡೇಶನ್ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ನ ನ್ಯಾಯಾಮೂರ್ತಿ ಪಿ ಸದಾಶಿವಂ ಅವರು, ದೇವದಾಸಿ ಪದ್ಧತಿಯಿಂದ ಮಹಿಳೆಯನ್ನು ಮುಕ್ತಗೊಳಿಸುವುದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳಿ ಎಂದು ನಿರ್ದೇಶಿಸಿದ್ದಾರೆ.
ಇದಲ್ಲದೇ, ದೇವದಾಸಿ ಪದ್ಧತಿ ತಡೆಯುವಲ್ಲಿ ಕರ್ನಾಟಕ ಸರ್ಕಾರ ವಿಫಲವಾಗಿರುವುದು ದೇಶಕ್ಕೆ ನಾಚಿಕೆಗೇಡು ಎಂದು ಹೇಳಿರುವ ನ್ಯಾಯಾಪೀಠ, ಪಿಐಎಲ್ ಅರ್ಜಿಗೆ ಪ್ರತಿಕ್ರಯಿಸುವಂತೆ ಸರ್ಕಾರಕ್ಕೆ ಆದೇಶಿದೆ.