ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ನವೆದೆಹಲಿ: ಅರುಣಾಚಲ ಪ್ರದೇಶ ವಿದ್ಯಾರ್ಥಿ ನಿಡೋ ತಾನಿಯ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಶುಕ್ರವಾರ ನಿಡೋ ತಾನಿಯ ಹತ್ಯೆ ಖಂಡಿಸಿ ಈಶಾನ್ಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈಶಾನ್ಯ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು.
ಇದೇ ವೇಳೆ ಪ್ರತಿಭಟನೆ ಹಿಂಸೆಗೆ ತಿರುಗಿದ ಪರಿಣಾಮ ದೆಹಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.