ಬಜೆಟ್ಗೆ ಅಸಮಧಾನ ವ್ಯಕ್ತಪಡಿಸಿದ ಶೆಟ್ಟರ್, ಯಡಿಯೂರಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2014-15 ಸಾಲಿನ ರಾಜ್ಯ ಬಜೆಟ್ ನಿರಾಶದಾಯಕ ಎಂದು ವಿರೋಧ ಪಕ್ಷದ ನಾಯಕ ಜಗದೀಶ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2014-15 ಸಾಲಿನ ರಾಜ್ಯ ಬಜೆಟ್ ನಿರಾಶದಾಯಕ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಶುಕ್ರವಾರ ಹೇಳಿದ್ದಾರೆ.
9ನೇ ಬಾರಿ ಸಿದ್ದರಾಮಯ್ಯನವರು ಬಜೆಟ್ ಮಂಡಿಸಿದರು. ಬಜೆಟ್ನಲ್ಲಿ ಇನ್ನೂ ಹೆಚ್ಚಿನ ನಿರೀಕ್ಷೆ ಇತ್ತು. ಆದರೆ ಇಂದು ಮಂಡಿಸಿದ ಬಜೆಟ್ ನಿರಾಶೆ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಹಣಕಾಸು ಇಲಾಖೆ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ಸಿದ್ದರಾಮಯ್ಯ ಅವರು ಹೆಚ್ಚಿನ ಅನುದಾನ ನೀಡಿಲ್ಲ. ಕೃಷಿ ಕ್ಷೇತ್ರಕ್ಕೆ ಆವರ್ತ ನಿಧಿ ಮೀಸಲಿಟ್ಟಿಲ್ಲ ಎಂದು ಆರೋಪಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಾತನಾಡಿ, ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂಧಿಸಿಲ. ಬರಪೀಡಿತ ಜಿಲ್ಲೆಗಳ ರೈತರ ನೆರವಿಗೆ ಸರ್ಕಾರ ಸ್ಪಂಧಿಸಿಲ್ಲ ಎಂದು ಆಪಾದಿಸಿದ್ದಾರೆ.