ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಮತಾ ಬ್ಯಾನರ್ಜಿಗೆ ಅಣ್ಣಾ ಹಜಾರೆ ಬೆಂಬಲ

ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ತೃಣಮೂಲ ಕಾಂಗ್ರೆಸ್(ಟಿಎಂಸಿ)ಗೆ ಬೆಂಬಲ ನೀಡಲಿದ್ದಾರೆ ಎಂದು...

Mainashree
Updated On : 14 Feb 2014, 1:57 am

ಪುಣೆ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ತೃಣಮೂಲ ಕಾಂಗ್ರೆಸ್(ಟಿಎಂಸಿ)ಗೆ ಬೆಂಬಲ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರ ಅಣ್ಣಾ ಹಜಾರೆ ಅವರು ಪ್ರಚಾರ ಮಾಡಲಿದ್ದಾರೆ ಎಂದು ಟಿಎಂಸಿಯ ಪ್ರಧಾನ ಕಾರ್ಯದರ್ಶಿ ಮುಖುಲ್ ರಾಯ್ ಹೇಳಿದ್ದಾರೆ.

ಫೆಬ್ರವರಿ 18ರಂದು ಅಣ್ಣಾ ಹಜಾರೆಯವರು ಟಿಎಂಸಿ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಹೋರಾಟಗಾರ ಹಜಾರೆ ಅವರ ಬೆಂಬಲ ಪಕ್ಷಕ್ಕೆ ದೊರಕುತ್ತಿರುವುದು ಹೆಮ್ಮೆಯ ವಿಷಯ. ಲೋಕಸಭಾ ಚುನಾವಣೆಗೆ ಅಣ್ಣಾ ಪಕ್ಷದ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇದರಿಂದ ನಮ್ಮ ಪಕ್ಷದ ಬಗ್ಗೆ ಜನರಿಗೆ ಹೆಚ್ಚು ನಂಬಿಕೆ ಬರಲಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗಷ್ಟೆ ಅಣ್ಣಾ ಹಜಾರೆಯವರು ಮಮತಾ ಬ್ಯಾನರ್ಜಿ ಅವರು ಬಹಳ ಸರಳ. ಮುಖ್ಯಮಂತ್ರಿಯಾದರು ಯಾವುದೇ ಸರ್ಕಾರಿ ಸೌಲಭ್ಯಗಳನ್ನು ದುರಪಯೋಗ ಪಡಿಸಿಕೊಂಡಿಲ್ಲ ಎಂದು ಶ್ಲಾಘಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement