ತೆಲಂಗಾಣ ವಿವಾದ-ಕಾಂಗ್ರೆಸ್ನಿಂದ ವೋಟ್ ಬ್ಯಾಂಕ್ ರಾಜಕೀಯ: ಮೋದಿ
ತೆಲಂಗಾಣ ವಿಷಯದಲ್ಲಿ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕೀಯ ನಡೆಸುತ್ತಿದೆ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ಪ್ರಧಾನಿ...
ಸೂರತ್: ತೆಲಂಗಾಣ ವಿಷಯದಲ್ಲಿ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕೀಯ ನಡೆಸುತ್ತಿದೆ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಕಾಂಗ್ರೆಸ್ ತೆಲಂಗಾಣ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಜನರಲ್ಲಿ ಗೊಂದಲವನ್ನುಂಟಮಾಡಿ, ವೋಟ್ ಬ್ಯಾಂಕ್ಗಾಗಿ ರಾಜಕೀಯ ನಡೆಸುತ್ತಿದೆ ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಆಪಾದಿಸಿದ್ದಾರೆ.
ಆಂಧ್ರದಲ್ಲಿ ಕಾಂಗ್ರೆಸ್ ವಿಷದ ಬೀಜ ಬಿತ್ತುತ್ತಿದೆ. ತನ್ನ ರಾಜಕೀಯ ಲಾಭಕ್ಕಾಗಿ ಆಂಧ್ರ ರಾಜ್ಯವನ್ನು ಬಲಿಕೊಡಲು ಸಿದ್ಧವಾಗಿದೆ ಎಂದು ಅವರು ದೂರಿದ್ದಾರೆ.
ವಿಷಧ ಬೀಜ ಬಿತ್ತುತ್ತಿರುವ ಕಾಂಗ್ರೆಸ್ನ್ನು ಕಿತ್ತೊಗೆದರೆ ಮಾತ್ರ ಶಾಂತಿ ಸಾಧ್ಯ. ಹಿಂಸಾಚಾರಗಳನ್ನು ತಡೆಯುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಮೋದಿ ಹೇಳಿದ್ದಾರೆ.