ತೇಜ್ಪಾಲ್ ವಿರುದ್ಧ ಸೋಮವಾರ ಚಾರ್ಜ್ಶೀಟ್
ಕಿರಿಯ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ತೆಹಲ್ಕಾ..
ಪಣಜಿ: ಕಿರಿಯ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ತೆಹಲ್ಕಾ ಸಂಸ್ಥಾಪಕ, ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ಪಾಲ್ ಅವರ ವಿರುದ್ಧ ಗೋವಾ ಪೊಲೀಸರು ಸೋಮವಾರ ಚಾರ್ಜ್ಶೀಟ್ ಸಲ್ಲಿಸಲಿದ್ದಾರೆ.
ಗೋವಾದ ಪಂಚತಾರ ಹೊಟೇಲೊಂದರಲ್ಲಿ ಆಯೋಜಿಸಲಾಗಿದ್ದ ತೆಹಲ್ಕಾ ಪತ್ರಿಕೆಯ ಕಾರ್ಯಕ್ರಮದ ವೇಳೆ ಕಿರಿಯ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಳೆದ ನವೆಂಬರ್ 30ರಂದು ತೇಜ್ಪಾಲ್ರನ್ನು ಗೋವಾ ಪೊಲೀಸರು ಬಂಧಿಸಿದ್ದರು.