ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ..!
ರಾಷ್ಟ್ರಪತಿ ಆಡಳಿತ ಹೇರುವಂತೆ ಪ್ರಣಬ್ ಮುಖರ್ಜಿ ಅವರಿಗೆ ಸಚಿವ ಸಂಪುಟ ಶಿಫಾರಸ್ಸು
ನವದೆಹಲಿ: ಅರವಿಂದ್ ಕೇಜ್ರೀವಾಲ್ ಅವರ ರಾಜಿನಾಮೆಯಿಂದಾಗಿ ಅತಂತ್ರ ಸ್ಥಿತಿ ಎದುರಿಸುತ್ತಿರುವ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಬಹುತೇಕ ಖಚಿತವಾಗಿದೆ.
ಅರವಿಂದ್ ಕೇಜ್ರಿವಾಲ್ ಅವರ ರಾಜಿನಾಮೆ ಮತ್ತು ದೆಹಲಿ ವಿಧಾನಸಭೆಯಲ್ಲಿ ಉಂಟಾಗಿರುವ ಅತಂತ್ರ ಸ್ಥಿತಿ ಕುರಿತು ಚರ್ಚಿಸಲು ಇಂದು ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಸಚಿವ ಸಂಪುಟಸಭೆ ಕರೆಯಲಾಗಿತ್ತು. ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ತಿಳಿದಬಂದಿದೆ.
ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ದೊರೆತಿಲ್ಲವಾದರೂ, ನಾಳೆ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬರುವ ಸಾಧ್ಯತೆ ಇದೆ.