ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜಿನಾಮೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು...
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜಿನಾಮೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ದೆಹಲಿ ಉಪ ರಾಜ್ಯಪಾಲ ನಜೀಬ್ ಜಂಗ್ ಅವರು ರಾಷ್ಟ್ರಪತಿ ಆಡಳಿತಕ್ಕೆ ಶನಿವಾರ ಶಿಫಾರಸು ಮಾಡಿದ್ದಾರೆ.
ಸಿಎಂ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ರಾಜಿನಾಮೆಯನ್ನು ನಜೀಬ್ ಜಂಗ್ ಅವರು ಸ್ವಿಕರಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಇಂದು ಶಿಫಾರಸು ಮಾಡಿದ್ದಾರೆ.
ಏತನ್ಮಧ್ಯೆ, ನಿನ್ನೆ ಕೇಜ್ರಿವಾಲ್ ಸಲ್ಲಿಸಿದ್ದ ರಾಜಿನಾಮೆ ಪತ್ರವನ್ನು ದೆಹಲಿ ಉಪ ರಾಜ್ಯಪಾಲರು ಇಂದು ಬೆಳಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರವಾನಿಸಿದ್ದರು.
ಜನಲೋಕಪಾಲ್ ಮಸೂದೆ ಜಾರಿಯಾಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಿನ್ನೆ ದೆಹಲಿ ಸಿಎಂ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಕೇಜ್ರಿವಾಲ್ ರಾಜಿನಾಮೆ ಪತ್ರವನ್ನು ಸ್ವೀಕರಿಸಿದ್ದ ನಜೀಬ್ ಜಂಗ್ ಅವರು ಇಂದು ಪ್ರಣಬ್ ಮುಖರ್ಜಿ ಹಾಗೂ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರವನ್ನು ರವಾನಿಸಿದ್ದರು.