ಮಸೂದೆಗಾಗಿ ರಾಜಿನಾಮೆ, ದೇಶದ ದೊಡ್ಡ ದುರಂತ: ಅಣ್ಣಾ ಹಜಾರೆ
ಮುಂಬೈ: ಜನಲೋಕಪಾಲ್ ಮಸೂದೆ ಮಂಡನೆಯಾಗದ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಜಿನಾಮೆ ನೀಡಿದ್ದನ್ನು 'ದೇಶದ ದೊಡ್ಡ ದುರಂತ' ಎಂದು ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ರಾಜಿನಾಮೆ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾಗುತ್ತಿದ್ದಂತೆಯೇ ತಮ್ಮ ಅನಿಸಿಕೆ ವ್ಯಕ್ತಪಡಿಸಿದ ಅಣ್ಣಾ ಹಜಾರೆ ಅವರು, ಜನಲೋಕಪಾಲ್ ಮಸೂದೆ ಮಂಡನೆಯಾಗದೇ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿರುವುದು ದೇಶದ ದೊಡ್ಡ ದುರಂತ ಎಂದು ವ್ಯಾಖ್ಯಾನಿಸಿದ್ದಾರೆ.