ಜಮ್ಮು ಕಾಶ್ಮೀರದಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ್ಯೆ
ಜಮ್ಮು ಕಾಶ್ಮೀರದ ಸೋಪುರೆಯಲ್ಲಿ ಓರ್ವ ಉಗ್ರನನ್ನು ಎನ್ಕೌಂಟರ್ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ...
ಶ್ರೀನಗರ: ಜಮ್ಮು ಕಾಶ್ಮೀರದ ಸೋಪುರೆಯಲ್ಲಿ ಓರ್ವ ಉಗ್ರನನ್ನು ಎನ್ಕೌಂಟರ್ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ.
ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರ ಶಫಿ ಶೇಖ್ನನ್ನು ಭಾರತೀಯ ಸೇನಾಪಡೆ ಭಾನುವಾರ ಎನ್ಕೌಂಟರ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತೋಬ್ಬ ಉಗ್ರ ಸೋಪುರೆ ಹಳ್ಳಿಯಲ್ಲಿ ಅವಿತಿದ್ದು, ಅವನ ಪತ್ತೆಗಾಗಿ ಕಾರ್ಯಚರಣೆ ಮುಂದುವರೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.