ಟಿಕೆಟ್ ಹಂಚಿಕೆ ವೇಳೆ ಮಹಿಳೆಯರಿಗೆ ಹೆಚ್ಚಿನ ಆದ್ಯತೆ : ರಾಹುಲ್
ಮುಂಬರುವ ಲೋಕಸಭಾ ಚುನಾವಣೆ ಟಿಕೆಟ್ ಹಿಂಚಿಕೆ ವೇಳೆ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು...
ತುಮಕೂರು: ಮುಂಬರುವ ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ವೇಳೆ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಹೇಳಿದ್ದಾರೆ.
ತುಮಕೂರಿನಿಂದ ಚಿತ್ರದುರ್ಗಕ್ಕೆ ಸಂಪಂರ್ಕಿಸುವ 189 ಕಿ.ಮೀ ಉದ್ದದ 6 ಪಥದ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯನ್ನು ಇಂದು ರಾಹುಲ್ ಗಾಂಧಿ ಉದ್ಘಾಟಿಸಿದರು.
ಆನಂತರ ಕಾಂಗ್ರೆಸ್ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ಮಾತು ನಿಜ ಅಲ್ಲವೇ? ಎಂದರು.
ರಾಜಕೀಯ ಕ್ಷೇತ್ರದಲ್ಲೂ ಮಹಿಳೆಯರು ಮುಂಚೂಣಿಗೆ ಬರಬೇಕು. ಹೀಗಾಗಿ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ವೇಳೆ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ರಾಹುಲ್ ಭರವಸೆ ನೀಡಿದರು.
ಮಹಿಳೆಯರು ಸಮಾಜದ ಮುಂಚೂಣಿಗೆ ಬರಬೇಕು. ಎಲ್ಲಾ ಹಂತದಲ್ಲೂ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗಬೇಕು. ಅಲ್ಲದೆ ಮಹಿಳೆಯ ಮೇಲಿನ ದಮನಕಾರಿ ಪ್ರವೃತ್ತಿ ನಿಲ್ಲಬೇಕಿದೆ ಎಂದು ರಾಹುಲ್ ತಿಳಿಸಿದ್ದಾರೆ.
ಏತನ್ಮಧ್ಯೆ, ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಸಿದ್ಧಗಂಗಾ ಮಠದ ಶ್ರೀ. ಶಿವಕುಮಾರ ಸ್ವಾಮೀಜಿ ಅವರು ಕಾರ್ಯವನ್ನು ರಾಹುಲ್ ಪ್ರಶಂಸಿದರು. ಅಲ್ಲದೆ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಬೆಳವಡಿ ಮಲ್ಲಮ್ಮ, ಕಿತ್ತೂರು ರಾಣಿ ಚನ್ನಮ್ಮ ಅವರನ್ನು ರಾಹುಲ್ ಸ್ಮರಿಸಿದರು.