ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಭೂಪಿಂದರ್ ಸಿಂಗ್ ಹೂಡಾ ಮೇಲೆ 'ಶೂ' ಎಸೆತ

Vishwanath S
Updated On : 16 Feb 2014, 5:59 am

ಹಿಸ್ಸಾರ್(ಹರಿಯಾಣ): ಹರಿಯಾಣ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಮೇಲೆ ಅಪರಿಚಿತ ವ್ಯಕ್ತಿಯೊರ್ವ ಶೂ ಎಸೆದಿರುವ ಘಟನೆ ಭಾನುವಾರ ನಡೆದಿದೆ.

ಹರಿಯಾಣದ ಹಿಸ್ಸಾರ್‌ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊರ್ವ ಸಿಎಂ ಹೂಡಾ ಅವರ ಮೇಲೆ ಶೂ ಎಸೆದು ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಇದಕ್ಕೂ ಮುನ್ನ ಫೆಬ್ರುವರಿ 2 ರಂದು ಪಾಣಿಪತ್‌ನ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಮೇಲೆ ಕೆಲಸ ಸಿಗದೇ ಹತಾಶನಾಗಿದ್ದ ಯುವಕನೊಬ್ಬ ನೇರವಾಗಿ ಕಪಾಳ ಮೋಕ್ಷ ಮಾಡಲು ಯತ್ನಿಸಿದ್ದ ಘಟನೆ ನಡೆದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement