ಮೋದಿ, ರಾಹುಲ್ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ಅನಿಲ ಬೆಲೆ ಏರಿಕೆ ಸಂಬಂಧ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮೌನವಹಿಸಿರುವುದೇಕೆ ಎಂದು ದೆಹಲಿ...
ನವದೆಹಲಿ: ಅನಿಲ ಬೆಲೆ ಏರಿಕೆ ಸಂಬಂಧ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮೌನವಹಿಸಿರುವುದೇಕೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಪ್ರಶ್ನಿಸಿದ್ದಾರೆ.
ಅನಿಲ ಬೆಲೆ ಏರಿಕೆ ಮಾಡಿದರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮೌನವಾಗಿದ್ದಾರೆ. ಬಿಜೆಪಿಗೂ ಮತ್ತು ಮುಖೇಶ್ ಅಂಬಾನಿಗೆ ಇರುವ ಸಂಬಂಧವೇನು ಎಂದು ಮೋದಿ ವಿರುದ್ಧ ಕೇಜ್ರಿವಾಲ್ ಟ್ವಿಟರ್ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಅನಿಲ ಬೆಲೆ ಏರಿಕೆ ಹಾಗೂ ಮುಖೇಶ್ ಅಂಬಾನಿ ನಿರ್ಧಾರಕ್ಕೆ ಬೆಂಬಲ ನೀಡಿರುವುದರ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟನೆ ನೀಡಲಿ