ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆಯಲ್ಲಿ ಚರ್ಚಿಸಿಲ್ಲ: ಸಿದ್ದು
ನವದೆಹಲಿ: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಿಳಿಸಿದ್ದಾರೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಇಂದು ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದಕ್ಕಾಗೆ ಮತ್ತೊಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇಂದು ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಉಸ್ತುವಾರಿ ಸಚಿವ ದಿಗ್ವಿಜಯ್ ಸಿಂಗ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗಿಯಾಗಿದ್ದರು.