ಜನಾರ್ದನ ರೆಡ್ಡಿಗೆ ಮಧ್ಯಂತರ ಜಾಮೀನು
ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಜರ್ನಾರ್ದನ ರೆಡ್ಡಿ ಅವರಿಗೆ ಸೋಮವಾರ...
ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಜರ್ನಾರ್ದನ ರೆಡ್ಡಿ ಅವರಿಗೆ ಸೋಮವಾರ ಸಿಬಿಐ ವಿಶೇಷ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಕೋರಿ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಬಿಐ ಕೋರ್ಟ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅನುಮತಿ ನೀಡಿದೆ. ಆದರೆ ಚಿಕಿತ್ಸಾ ವೆಚ್ಚವನ್ನು ಜನಾರ್ದನ ರೆಡ್ಡಿಯೇ ಭರಿಸಬೇಕು ಎಂದು ಕೋರ್ಟ್ ಸೂಚಿಸಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ಜನಾರ್ದನ ರೆಡ್ಡಿಗೆ ಫೆ.17ರಿಂದ ಫೆ.24ರವರೆಗೆ ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಪೊಲೀಸ್ ಭದ್ರತೆಯೊಂದಿಗೆ ಚಿಕಿತ್ಸೆಗೆ ಕೋರ್ಟ್ ಸೂಚಿಸಿದೆ.