ತೇಜ್ಪಾಲ್ ವಿರುದ್ಧ ಜಾರ್ಜ್ಶೀಟ್ ಸಲ್ಲಿಕೆ
ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜಪಾಲ್ ...
ಪಣಜಿ: ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜಪಾಲ್ ವಿರುದ್ಧ ಗೋವಾ ಪೊಲೀಸರು ಸೋಮವಾರ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಇಂದು ಗೋವಾದ ಪೊಲೀಸರು ಪಣಜಿ ಸೆಷನ್ಸ್ ಕೋರ್ಟ್ನಲ್ಲಿ ಆರೋಪ ಪಟ್ಟಿ ಸಲ್ಲಿದ್ದಾರೆ. ಆರೋಪ ಪಟ್ಟಿಯಲ್ಲಿ ಅತ್ಯಾಚಾರವೆಸಗಿದ ಬಗ್ಗೆ ಉಲ್ಲೇಖಿಸಲಾಗಿದೆ.
ಗೋವಾದ ಪಂಚತಾರ ಹೋಟೆಲೊಂದರಲ್ಲಿ ಆಯೋಜಿಸಲಾಗಿದ್ದ ತೆಹಲ್ಕಾ ಪತ್ರಿಕೆಯ ಕಾರ್ಯಕ್ರಮದ ವೇಳೆ ಕಿರಿಯ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಳೆದ ನವೆಂಬರ್ 30ರಂದು ತೇಜ್ಪಾಲ್ರನ್ನು ಗೋವಾ ಪೊಲೀಸರು ಬಂಧಿಸಿದ್ದರು.