ಲೋ-ಚುನಾವಣೆಗೆ 'ಕೈ' ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಸುಮಾರು 90 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ.
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ನಡೆದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ, ಕರ್ನಾಟಕ, ಉತ್ತರ ಪ್ರದೇಶ, ಜಾರ್ಖಂಡ್, ಛತ್ತೀಸ್ಗಡ ರಾಜ್ಯಗಳ ಸುಮಾರು 90 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ದಗೊಳಿಸಿದೆ.
ಉತ್ತರ ಪ್ರದೇಶದ ಸುಮಾರು 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಆದರೆ ಇಂದು ನಡೆದ ಚುನಾವಣಾ ಸಮಿತಿ ಸಭೆಗೆ ಒಡಿಶಾ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳು ಅಖೈರಾಗಿದ್ದರು.
ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಉಸ್ತುವಾರಿ ಸಚಿವ ದಿಗ್ವಿಜಯ್ ಸಿಂಗ್ ಸೇರಿದಂತೆ ರಾಜ್ಯಗಳ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.