ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೋಕಸಮರ: ಕಾಂಗ್ರೆಸ್‌ನ ಮೊದಲ ಪಟ್ಟಿ ಅಂತಿಮ, ಬೆಂಗಳೂರು ದ.ದಿಂದ ನಿಲೇಕಣಿ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ರಾಜ್ಯದ 12 ಲೋಕಸಭಾ ಕ್ಷೇತ್ರದ ...

Lingaraj Badiger
Updated On : 17 Feb 2014, 10:57 am

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ರಾಜ್ಯದ 12 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಅಂತಿಮಗೊಳಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಇಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಹಾಲಿ 9 ಸಂಸದರನ್ನೊಳಗೊಂಡ 12 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಭಾಗವಹಿಸಿದ್ದರು.

ವಿಶಿಷ್ಟ ಗುರುತಿನ ಪತ್ರ ಪ್ರಾಧಿಕಾರದ ಅಧ್ಯಕ್ಷ ನಂದನ್ ನಿಲೇಕಣಿ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರ ವಿರುದ್ಧ ಸ್ಪರ್ಧಿಸುವುದು ಖಚಿತವಾಗಿದೆ. ಕೈ ಟಿಕೆಟ್ ಖಚಿತವಾದ ಹಿನ್ನೆಲೆಯಲ್ಲಿ ನಿಲೇಕಣಿ ಅವರು ಈಗಾಗಲೇ ತಮ್ಮ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮತದಾರರನ್ನು ಓಲೈಸುವ ಯತ್ನ ನಡೆಸುತ್ತಿದ್ದಾರೆ.

ಅಂತಿಮಗೊಂಡ ಅಭ್ಯರ್ಥಿಗಳ ಪಟ್ಟಿ
1 ಬೆಂಗಳೂರು ದಕ್ಷಿಣ- ನಂದನ್ ನಿಲೇಕಣಿ
2. ಬೆಳಗಾವಿ- ಲಕ್ಷ್ಮೀ ಹೆಬ್ಬಾಳಕರ್
3. ಬಳ್ಳಾರಿ - ಎಚ್.ವೈ. ಹನುಮಂತಪ್ಪ

9 ಹಾಲಿ ಸಂಸದರು
1. ಬೀದರ್- ಎನ್.ಧರ್ಮಸಿಂಗ್
2. ಗುಲ್ಬರ್ಗಾ - ಮಲ್ಲಿಕಾರ್ಜುನ್ ಖರ್ಗೆ
3. ಕೋಲಾರ - ಕೆ.ಎಚ್. ಮುನಿಯಪ್ಪ
4. ಚಿಕ್ಕಬಳ್ಳಾಪುರ- ಎಂ.ವೀರಪ್ಪ ಮೊಯ್ಲಿ
5. ಮೈಸೂರು- ಎಚ್.ವಿಶ್ವನಾಥ್
6. ಚಾಮರಾಜನಗರ- ದೃವನಾರಾಯಣ
7. ಉಡುಪಿ, ಚಿಕ್ಕಮಗಳೂರು- ಕೆ.ಜಯಪ್ರಕಾಶ್ ಹೆಗಡೆ
8. ಮಂಡ್ಯ - ರಮ್ಯಾ
9. ಬೆಂಗಳೂರು ಗ್ರಾಮಾಂತರ- ಡಿ.ಕೆ.ಸುರೇಶ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement